Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:3 - ಕನ್ನಡ ಸತ್ಯವೇದವು C.L. Bible (BSI)

3 ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ; ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲು ನನಗೆ ಮರೆಯಲ್ಲ; ಎಫ್ರಾಯೀಮೇ, ನೀನೀಗ ಸೂಳೆತನಮಾಡಿದ್ದೀ, ಇಸ್ರಾಯೇಲು ಹೊಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳೆಯಂತೆ ವರ್ತಿಸುತ್ತಿರುವೆ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಎಫ್ರಾಯೀಮನ್ನು ಬಲ್ಲೆನು, ಇಸ್ರಾಯೇಲು ನನಗೆ ಮರೆಯಾದದ್ದಲ್ಲ. ಏಕೆಂದರೆ ಎಫ್ರಾಯೀಮೇ, ನೀನು ಈಗಲೇ ವ್ಯಭಿಚಾರ ಮಾಡಲು ತಿರುಗಿಕೊಂಡಿದ್ದೀ. ಇಸ್ರಾಯೇಲು ಸಹ ಅಪವಿತ್ರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:3
24 ತಿಳಿವುಗಳ ಹೋಲಿಕೆ  

“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ನಿನ್ನ ಕೃತ್ಯಗಳನ್ನು ನಾನು ಬಲ್ಲೆ. ನೀನು ತಣ್ಣಗೂ ಇಲ್ಲ, ಬಿಸಿಯಾಗೂ ಇಲ್ಲ. ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


“ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:


ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.


ಸಿರಿಯ, ಇಸ್ರಯೇಲ್, ಅರಸನಾದ ಪೆಕಹನೊಂದಿಗೆ ಸೇರಿ ಒಳಸಂಚು ಮಾಡಿದ್ದಾರೆ.


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು.


ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”


ಇಸ್ರಯೇಲ್ ಮನೆತನದಲ್ಲಿ ಘೋರಕೃತ್ಯಗಳು ಕಾಣಿಸಿಕೊಂಡಿವೆ. ಅಲ್ಲಿ ಎಫ್ರಯಿಮಿನೊಳಗೆ ವೇಶ್ಯಾಚಾರ ನಡೆಯುತ್ತಿದೆ. ಇಸ್ರಯೇಲ್ ಕಲುಷಿತವಾಗಿದೆ.


ಬೆಂಗಾಡಿನಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಕಾಪಾಡಿದವನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು