Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:4 - ಕನ್ನಡ ಸತ್ಯವೇದವು C.L. Bible (BSI)

4 ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಬಿಡವು; ವ್ಯಭಿಚಾರ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ಅರಿಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:4
22 ತಿಳಿವುಗಳ ಹೋಲಿಕೆ  

ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.


“ಮದ್ಯಪಾನ, ದ್ರಾಕ್ಷಾರಸ - ಇವು ಜನರನ್ನು ಬುದ್ಧಿಹೀನರನ್ನಾಗಿ ಮಾಡುತ್ತವೆ.


“ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು