Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:7 - ಕನ್ನಡ ಸತ್ಯವೇದವು C.L. Bible (BSI)

7 ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ ಅವುಗಳ ಭೂಸ್ವಾಸ್ತ್ಯಗಳನ್ನೂ ಈಗ ಈ ಮುಂದಿನ ತಿಂಗಳು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಯೆಹೋವ ದೇವರಿಗೆ ಅಪನಂಬಿಗಸ್ತರಾಗಿದ್ದಾರೆ. ಅವರು ವ್ಯಭಿಚಾರದ ಮಕ್ಕಳನ್ನು ಪಡೆದಿದ್ದಾರೆ. ಅವರು ತಮ್ಮ ಅಮಾವಾಸ್ಯೆ ಹಬ್ಬಗಳನ್ನು ಆಚರಿಸಿದಾಗ, ಅವರ ಹೊಲಗಳು ನುಂಗಿಬಿಡಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:7
15 ತಿಳಿವುಗಳ ಹೋಲಿಕೆ  

“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


“ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.


ಅವಳ ಮಕ್ಕಳಿಗೂ ಕರುಣೆಯನ್ನು ತೋರಿಸೆನು; ಅವರು ವ್ಯಭಿಚಾರದಿಂದ ಹುಟ್ಟಿದವರು.


ಆದಕಾರಣ ನೀನು ಅವರಿಗೆ ಹೀಗೆ ಹೇಳು: ಸರ್ವೇಶ್ವರನಾದ ದೇವರು ಹೇಳುವುದನ್ನು ಗಮನಿಸಿ: ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವುದು ಖಂಡಿತ; ಇದು ಸರ್ವೇಶ್ವರನಾದ ದೇವರ ನುಡಿ.”


ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಕ್ರೂರ ವೈರಿಗಳಿಂದೆನ್ನ ಬಿಡಿಸಯ್ಯಾ I ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II


ನನ್ನ ಸೆಳೆದುಕೊ ಮಹಾಜಲರಾಶಿಯಿಂದ I ನಿನ್ನ ಕೈಚಾಚಿ ಮೇಲಣಲೋಕದಿಂದ I ನನ್ನನು ಬಿಡಿಸು ಅನ್ಯಜನರ ಕೈಯಿಂದ II


ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.


“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು