Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:8 - ಕನ್ನಡ ಸತ್ಯವೇದವು C.L. Bible (BSI)

8 ಗಿಬ್ಯದಲ್ಲಿ ತುತೂರಿಯನ್ನು ಊದಿರಿ, ರಮಾದಲ್ಲಿ ಕೊಂಬನ್ನು ಮೊಳಗಿಸಿರಿ; ಬೇತಾವೆನಿನಲ್ಲಿ ಕಾಳಗದ ಕರೆನೀಡಿರಿ. ಬೆನ್ಯಾಮಿನೇ, ನಿನ್ನನ್ನು ಬೆನ್ನಟ್ಟಿಬರುತ್ತಿರುವವರನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗಿಬ್ಯದಲ್ಲಿ ತುತೂರಿಯನ್ನೂದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತಾವೆನಿನಲ್ಲಿ ಆರ್ಭಟಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತ್ತೂರಿಯನ್ನೂದು. ಬೇತಾವೆನಿನಲ್ಲಿ ಎಚ್ಚರಿಕೆಯನ್ನು ನೀಡು. ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:8
20 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.


ಅನಂತರ ಸಮುವೇಲನು ರಾಮಾಕ್ಕೆ ಹೋದನು; ಇತ್ತ ಸೌಲನು ತನ್ನ ಊರಾದ ಗಿಬೆಯದಲ್ಲಿದ್ದ ಮನೆಗೆ ತೆರಳಿದನು.


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಕಣಿವೆಯನ್ನು ದಾಟಿದೆ; ‘ಗೆಬಾದಲ್ಲಿ ದಂಡಿಳಿಸೋಣ’ ಎಂದು ಹೇಳುತ್ತಿದೆ. ರಾಮಾ ಜನತೆ ನಡುಗುತ್ತಿದೆ, ಸೌಲನ ಗಿಬೆಯದ ಜನ ಪಲಾಯನ ಗೈದಿದೆ.


ಬಂದರು ಅಮಾಲೇಕ್ಯರ ಪ್ರದೇಶದೊಳು ನೆಲೆಗೊಂಡ ಎಫ್ರಯೀಮ್ಯರು, ಅವರೊಂದಿಗೆ ಬಂದರು ಬೆನ್ಯಾಮೀನ್ಯರು, ಮಾಕೀರನ ಗೋತ್ರದ ಪ್ರಧಾನರು, ಜೆಬುಲೂನ್ ಕುಲದೊಳು ದಂಡಧಾರಿಗಳಾದ ಸೇನಾನಾಯಕರು.


ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ.


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿದನು; ಇನ್ನೊಂದನ್ನು ದಾನಿಗೆ ಕಳುಹಿಸಿದನು.


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ಆದುದರಿಂದ ಇಸ್ರಯೇಲರ ಹಿರಿಯರೆಲ್ಲರೂ ಕೂಡಿ ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದು,


ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.


ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು