Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:3 - ಕನ್ನಡ ಸತ್ಯವೇದವು C.L. Bible (BSI)

3 ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:3
36 ತಿಳಿವುಗಳ ಹೋಲಿಕೆ  

ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಇಳೆಯನು ಸಂಧಿಸಿ, ಮಳೆಯನು ಸುರಿಸಿ, ನೆಲವನು ನೀ ಸಿರಿಗೊಳಿಸುವಾತ I ನಾಲೆ ತುಂಬ ನೀರಹರಿಸಿ, ಹೊಲ ತುಂಬ ನೀ ಧಾನ್ಯನೀಡುವಾತ II


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನನ್ನನ್ನು ಮಳೆಯಂತೆ ಎದುರುನೋಡುತ್ತಿದ್ದರು ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.


ಏರುತಿಹನು ದಿಗಂತದೊಂದು ಕೊನೆಯಿಂದ ಮತ್ತೊಂದು ಕೊನೆಗೆ I ಮುಚ್ಚುಮರೆಯಾದುದೊಂದೂ ಇರದು, ಆತನಾ ಉರಿಗಣ್ಣಿಗೆ II


ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು