Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:6 - ಕನ್ನಡ ಸತ್ಯವೇದವು C.L. Bible (BSI)

6 ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:6
24 ತಿಳಿವುಗಳ ಹೋಲಿಕೆ  

ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


‘ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.


ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.


ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ ದಹನಬಲಿಯ ವಿಷಯವಾಗಿಯಾಗಲಿ, ಯಜ್ಞಬಲಿಯ ವಿಷಯವಾಗಿಯಾಗಲಿ ನಾನು ಅವರಿಗೆ ಏನೂ ಹೇಳಲಿಲ್ಲ; ಯಾವ ಕಟ್ಟಳೆಯನ್ನೂ ಕೊಡಲಿಲ್ಲ.


ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.


ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II


ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಅಲ್ಲಿಂದ ಬಂದ ಗಂಡಸರೆಲ್ಲರಿಗೆ ಸುನ್ನತಿ ಆಗಿತ್ತು. ಈಜಿಪ್ಟನ್ನು ಬಿಟ್ಟ ಅನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು