Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:1 - ಕನ್ನಡ ಸತ್ಯವೇದವು C.L. Bible (BSI)

1 “ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:1
30 ತಿಳಿವುಗಳ ಹೋಲಿಕೆ  

“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”


“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ.


ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ?


“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.


“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.


ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.


“ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.


ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ನ್ಯಾಯವನ್ನು ಓಡಿಸಿಬಿಟ್ಟಿದ್ದೇವೆ; ನೀತಿ ಸಮೀಪಿಸದಂತೆ ಮಾಡಿದ್ದೇವೆ. ಸತ್ಯವು ಸಾರ್ವಜನಿಕ ಚೌಕದಲ್ಲಿ ಬಿದ್ದುಹೋಗಿದೆ; ಸದಾಚಾರವು ಪ್ರವೇಶಿಸಲಾಗದಿದೆ.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.


ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು