Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:12 - ಕನ್ನಡ ಸತ್ಯವೇದವು C.L. Bible (BSI)

12 ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು; ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು. ಆಕಾಶದ ಪಕ್ಷಿಗಳ ಹಾಗೆ, ಅವರನ್ನು ಕೆಳಗೆ ಇಳಿಸಿ, ಅವರು ಒಟ್ಟಿಗೆ ಸೇರುವುದನ್ನು ನಾನು ಕೇಳಿದಾಗ, ನಾನು ಅವುಗಳನ್ನು ಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:12
15 ತಿಳಿವುಗಳ ಹೋಲಿಕೆ  

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗುಂಪಾಗಿ ಕೂಡಿದ ಬಹುಜನಾಂಗಗಳ ಕೈಯಿಂದ, ನಾ ನಿನ್ನ ಮೇಲೆ ಬೀಸುವೆ ಬಲೆಯೊಂದ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು