Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:13 - ಕನ್ನಡ ಸತ್ಯವೇದವು C.L. Bible (BSI)

13 “ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ನನ್ನ ಕಡೆಯಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದ್ದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರಿಗೆ ಕಷ್ಟ, ಏಕೆಂದರೆ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರು ನಾಶವಾಗಲಿ! ಏಕೆಂದರೆ ಅವರು ನನಗೆ ವಿರುದ್ಧವಾಗಿ ದ್ರೋಹ ಮಾಡಿದ್ದಾರೆ. ನಾನು ಅವರಿಗೆ ವಿಮೋಚನೆ ಮಾಡಿದ್ದರೂ, ಅವರು ನನಗೆ ವಿರುದ್ಧವಾಗಿ ಸುಳ್ಳು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:13
42 ತಿಳಿವುಗಳ ಹೋಲಿಕೆ  

ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.


ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.


ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.


ತಮ್ಮ ಮಾತಿಗೆ ಕಿವಿಗೊಡದ ಈ ಜನರನ್ನು ಸರ್ವೇಶ್ವರ ತಳ್ಳಿಬಿಡುವರು. ಇತರ ಜನಾಂಗಗಳ ಮಧ್ಯೆ ಅವರು ಅಲೆಮಾರಿಗಳಂತೆ ಇರುವರು.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


“ಹೆತ್ತವರು ತಿಂದರು ಹುಳಿದ್ರಾಕ್ಷಿಯನ್ನು; ಚಳಿತುಹೋದವು ಅವರ ಮಕ್ಕಳ ಹಲ್ಲುಗಳು” ಎಂಬ ಗಾದೆಯನ್ನು ನೀವು ಇಸ್ರಯೇಲ್‍ ನಾಡನ್ನು ಕುರಿತು ಹೇಳುವುದೇಕೆ?


ಅಯ್ಯೋ, ನಿನಗೆ ಧಿಕ್ಕಾರ! ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II


ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನಿಗೆ, ‘ತೊಲಗಿಹೋಗು ನಮ್ಮಿಂದ’ ಎಂದರು.


ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”


ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.


ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು