Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:14 - ಕನ್ನಡ ಸತ್ಯವೇದವು C.L. Bible (BSI)

14 ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:14
23 ತಿಳಿವುಗಳ ಹೋಲಿಕೆ  

ಬೇಡಿಕೊಂಡರೂ ನಿಮಗದು ದೊರಕುವುದಿಲ್ಲ. ಏಕೆಂದರೆ, ನಿಮ್ಮ ಬೇಡಿಕೆ ದುರುದ್ದೇಶದಿಂದ ಕೂಡಿರುತ್ತದೆ. ಭೋಗಾಭಿಲಾಶೆಗಳ ಈಡೇರಿಕೆ ನಿಮ್ಮ ಗುರಿಯಾಗಿರುತ್ತದೆ.


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


“ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?


ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ನನ್ನ ಭಕ್ತರು ಹೃದಯಾನಂದದಿಂದ ಹಿಗ್ಗಿ ಹಾಡುವರು; ನೀವಾದರೋ ಮನನೊಂದು ಮೊರೆಯಿಡುವಿರಿ; ದುಃಖದಿಂದ ಅಳುವಿರಿ.


ಆ ಊರಿನವರು ಒಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಆಲೆಗಳಲ್ಲಿ ರಸ ತೆಗೆದು, ತಮ್ಮ ದೇವರ ಗುಡಿಗೆ ಹೋಗಿ, ಹಬ್ಬಮಾಡಿ, ಉಂಡು, ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”


ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.


ಅಂತೆಯೇ ಮರುದಿನ ಬೆಳಿಗ್ಗೆ ಜನರು ಎದ್ದು ದಹನಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು. ಆಮೇಲೆ ಎದ್ದು ಕುಣಿದಾಡಿದರು.


ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ.


ನನ್ನನ್ನು ತಮ್ಮ ದೇವರೆಂದೂ ತಾವು ದೇವಜನರೆಂದೂ ನನ್ನನ್ನು ಅರಿತವರೆಂದೂ ಕೂಗಿಕೊಳ್ಳುತ್ತಾರೆ.


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


“ಇಸ್ರಯೇಲ್, ನಿನ್ನನ್ನು ನಾಶಮಾಡುವೆನು, ನಿನಗೆ ನೆರವಾಗಬಲ್ಲವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು