Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:15 - ಕನ್ನಡ ಸತ್ಯವೇದವು C.L. Bible (BSI)

15 ನಾನೇ ಅವರಿಗೆ ಯುದ್ಧಾಭ್ಯಾಸ ಮಾಡಿಸಿ, ಅವರ ಭುಜಬಲವನ್ನು ಬೆಳೆಸಿದರೂ ನನ್ನ ವಿರುದ್ಧ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರಿಗೆ ಯುದ್ಧವನ್ನು ಕಲಿಸಿ ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಅವರಿಗೆ ತರಬೇತಿಕೊಟ್ಟು ಅವರ ತೋಳುಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ. ಆದರೂ ಅವರು ನನಗೆ ವಿರುದ್ಧವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:15
18 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ವಿರುದ್ಧ ಮಾಡಬಲ್ಲಿರಾ ನೀವು ಕುಯುಕ್ತಿ? ಮರಳಿ ತಲೆಯೆತ್ತದಂತೆ ನಾಶಮಾಡುವನು ನಿಮ್ಮನು ಪೂರ್ತಿಯಾಗಿ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ಸರ್ವೇಶ್ವರನಿಗೂ ಆತ ಅಭಿಷೇಕಿಸಿದವನಿಗೂ ವಿರುದ್ಧ ‘ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?’ ಎಂದು ನಮ್ಮ ಪಿತಾಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಮಗನೇ, ಸರ್ವೇಶ್ವರನ ಶಿಕ್ಷೆಯನ್ನು ತಾತ್ಸಾರಮಾಡಬೇಡ, ಆತನು ನೀಡುವ ಎಚ್ಚರಿಕೆಗೆ ಬೇಸರಗೊಳ್ಳಬೇಡ.


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II


ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II


ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ಅವನ ಮುಖಾಂತರವಾಗಿ ಅವರು ಸಿರಿಯಾದವರ ಕೈಯಿಂದ ಬಿಡುಗಡೆಯಾಗಿ, ಮುಂದಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಕೇಡನು ಕಲ್ಪಿಸುತ್ತಾರವರು ಮನದೊಳು I ಕಲಹವೆಬ್ಬಿಸುತ್ತಾರೆ ಯಾವಾಗಲೂ II


“ಇಸ್ರಯೇಲ್, ನಿನ್ನನ್ನು ನಾಶಮಾಡುವೆನು, ನಿನಗೆ ನೆರವಾಗಬಲ್ಲವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು