Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:2 - ಕನ್ನಡ ಸತ್ಯವೇದವು C.L. Bible (BSI)

2 ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮಂದಟ್ಟುಮಾಡಿಕೊಳ್ಳುವದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:2
33 ತಿಳಿವುಗಳ ಹೋಲಿಕೆ  

ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು.


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ !


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.


“ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.


ನೀವು, ನಿಮ್ಮ ಪೂರ್ವಜರು, ನಿಮ್ಮ ಅರಸರು, ಅಧಿಕಾರಿಗಳು, ಜನಸಾಮಾನ್ಯರು ಮತ್ತು ನೀವೆಲ್ಲರು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಎತ್ತಿದ ಧೂಪಾರತಿ ಸರ್ವೇಶ್ವರನ ನೆನಪಿನಲ್ಲಿ ಇದೆ ಅಲ್ಲವೆ? ಅದನ್ನು ಅವರು ಮರೆತುಬಿಟ್ಟಿದ್ದಾರೆಯೇ?


ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.


“ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ.


ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.


ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು