Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:3 - ಕನ್ನಡ ಸತ್ಯವೇದವು C.L. Bible (BSI)

3 “ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರ ದುಷ್ಟತನವು ಅವರ ಅರಸರನ್ನು ಸಂತಸಗೊಳಿಸುತ್ತದೆ. ಅವರ ಸುಳ್ಳುಗಳು ಅವರ ನಾಯಕರನ್ನು ಸಂತೋಷಪಡಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:3
16 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.


“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು