Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:6 - ಕನ್ನಡ ಸತ್ಯವೇದವು C.L. Bible (BSI)

6 ಒಳಸಂಚಿನಿಂದ ಕೂಡಿದ ಅವರ ಹೃದಯ ಒಲೆಯಂತೆ ಉರಿಯುತ್ತದೆ. ಅವರ ಕೋಪಾಗ್ನಿ ರಾತ್ರಿಯೆಲ್ಲ ಹೊತ್ತಿಕೊಂಡೇ ಇರುತ್ತದೆ. ಬೆಳಗಾದದ್ದೇ ಧಗಧಗನೆ ಭುಗಿಲೇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿ ಉರಿಯುತ್ತಿದ್ದಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿರುತ್ತಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜನರು ಗುಪ್ತವಾಗಿ ಯೋಜನೆಯನ್ನು ತಯಾರಿಸುವರು. ಉರಿಯುವ ಒಲೆಯಂತೆ ಅವರ ಹೃದಯವು ಉತ್ಸಾಹಗೊಳ್ಳುವುದು. ಅವರ ಉತ್ಸಾಹವು ರಾತ್ರಿಯೆಲ್ಲಾ ಉರಿಯುವುದು. ಅದು ಮುಂಜಾನೆಯಲ್ಲಿ ಧಗಧಗಿಸುವ ಬೆಂಕಿಯ ಕಾವಿನಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಹೊಂಚುಹಾಕಿಕೊಂಡಿದ್ದಾಗ, ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ. ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ ಬೆಳಿಗ್ಗೆ ಅದು ಪ್ರಜ್ವಲಿಸುವ ಬೆಂಕಿಯ ಹಾಗೆ ಉರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:6
8 ತಿಳಿವುಗಳ ಹೋಲಿಕೆ  

ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


“ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.”


ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.


ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು