Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:10 - ಕನ್ನಡ ಸತ್ಯವೇದವು C.L. Bible (BSI)

10 ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದು ಜನಾಂಗಗಳೊಳಗೆ ವಿುಂಡರನ್ನು ಸಂಪಾದಿಸಿದರೂ ಅದನ್ನು ನಾನು ಈಗ ಸೆರೆಕೂಡುವೆನು; ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನಾಂಗಗಳ ಮಧ್ಯೆ ಇರುವ ತನ್ನ ಪ್ರಿಯತಮರ ಕಡೆಗೆ ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು ಒಟ್ಟುಸೇರಿಸುವೆನು. ಆದರೆ ಅದರ ಮೊದಲು ಆ ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:10
21 ತಿಳಿವುಗಳ ಹೋಲಿಕೆ  

ಇವುಗಳನ್ನು ನಾನು ನೋಡಿ, ನೀನು ರಮಿಸಿದ ನಿನ್ನ ಎಲ್ಲ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತ ಜಾರರನ್ನೂ, ನೀನು ಹಗೆಮಾಡಿದ ಎಲ್ಲರನ್ನೂ, ಸುತ್ತುಮುತ್ತಲು ನಿನಗೆ ವಿರುದ್ಧ ಒಟ್ಟುಗೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.


ಸಕಾಲದಲ್ಲಿ ನಾನು ಅವರನ್ನು ದಂಡಿಸುವೆನು; ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿ ಆಗುವುದು; ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು.


“ನನ್ನ ದಂಡನಾಯಕರೆಲ್ಲ ಅರಸರಲ್ಲವೇ?


“ಸ್ವಲ್ಪಕಾಲದಲ್ಲೇ ಮತ್ತೊಮ್ಮೆ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಮರುಭೂಮಿಯನ್ನೂ ಅದರಿಸುವೆನು.


ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.


ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪಾಗ್ನಿಯಲ್ಲಿ ಇಟ್ಟು ಕರಗಿಸುವೆನು.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರು ಭಾಷೆಯಲ್ಲಿ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ;


ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.


ಅಸ್ಸೀರಿಯದ ಅರಸ ಶಲ್ಮನೆಸರನು ಇವನಿಗೆ ವಿರುದ್ಧ ದಂಡೆತ್ತಿ ಬಂದಾಗ ಇವನು ಇವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.


ಸಾಮಾನ್ಯವಾಗಿ ಸೂಳೆಯರಿಗೆ ಹಣ ಕೊಡುವುದುಂಟು; ನೀನಾದರೋ ನಿನ್ನ ಎಲ್ಲಾ ಮಿಂಡರಿಗೆ ನೀನೇ ಹಣ ನೀಡುತ್ತಿರುವೆ. ಅವರು ಎಲ್ಲ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.


ಒಹೊಲಳು ನನ್ನವಳಾಗಿದ್ದರೂ ಹಾದರ ನಡೆಸಿ


ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.


ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.


ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು