Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:13 - ಕನ್ನಡ ಸತ್ಯವೇದವು C.L. Bible (BSI)

13 ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:13
30 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


“ಅವರು ನನ್ನ ಬಳಿಗೆ ಬಾರದ ಕಾರಣ, ಇಸ್ರಯೇಲ್ ಈಜಿಪ್ಟಿಗೆ ಹಿಂದಿರುಗುವುದು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವುದು.


ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.


ನೀವು ಈಜಿಪ್ಟ್ ದೇಶವನ್ನು ಮರಳಿ ಎಂದಿಗೂ ನೋಡುವುದಿಲ್ಲವೆಂದು ಸರ್ವೇಶ್ವರ ಹೇಳಿದ್ದರೂ ಅವರು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗಮಾಡುವರು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನೇ ಗಂಡು ಹೆಣ್ಣು ಎನ್ನದೆ ಗುಲಾಮರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.”


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.


ಆದರೂ ನೀವೆಲ್ಲಾ ಒಂದಾಗಿ ಸೇರುವಾಗ ನೀವು ಮಾಡುವ ಭೋಜನ ಪ್ರಭುವಿನ ಭೋಜನವಲ್ಲ.


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.


ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.


ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ಈಜಿಪ್ಟ್ ಇನ್ನು ಇಸ್ರಯೇಲ್ ವಂಶದವರ ಭರವಸೆಯಾಗದು; ಅದರ ಕಡೆಗೆ ಕಣ್ಣೆತ್ತುವಾಗ ದೇವದ್ರೋಹದ ನೆನಪು ಇಸ್ರಯೇಲರಲ್ಲಿ ಹುಟ್ಟುವುದು; ನಾನೇ ಸರ್ವೇಶ್ವರ ಎಂದು ಅವರಿಗೆ ಮನದಟ್ಟಾಗುವುದು.”


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು