ಹೋಶೇಯ 8:4 - ಕನ್ನಡ ಸತ್ಯವೇದವು C.L. Bible (BSI)4 “ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಅಪ್ಪಣೆಯಿಲ್ಲದೆ ರಾಜರನ್ನು ಕಲ್ಪಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ; ತಮ್ಮ ಬೆಳ್ಳಿ ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದ್ದರಿಂದ ಅವರು ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |