ಹೋಶೇಯ 8:5 - ಕನ್ನಡ ಸತ್ಯವೇದವು C.L. Bible (BSI)5 ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವದಕ್ಕೆ ಇನ್ನೆಷ್ಟು ಕಾಲ ಹಿಡಿಯುವದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5-6 ಯೆಹೋವನು ನೀವು ಮಾಡಿಕೊಂಡ ಬಸವನನ್ನು ನಿರಾಕರಿಸಿದ್ದಾನೆ. ಸಮಾರ್ಯವೇ, ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರ ವಿರುದ್ಧವಾಗಿ ತುಂಬಾ ಕೋಪಗೊಂಡಿದ್ದೇನೆ.’ ಇಸ್ರೇಲಿನ ಜನರು ಅವರ ಪಾಪಗಳಿಗಾಗಿ ಶಿಕ್ಷಿಸಲ್ಪಡುವರು. ಶಿಲ್ಪಿಯು ಅವರ ವಿಗ್ರಹಗಳನ್ನು ಮಾಡಿದನು. ಅವು ದೇವರಲ್ಲ. ಸಮಾರ್ಯದ ಬಸವನ ವಿಗ್ರಹಗಳು ಚೂರುಚೂರಾಗಿ ಒಡೆಯಲ್ಪಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ? ಅಧ್ಯಾಯವನ್ನು ನೋಡಿ |