Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:6 - ಕನ್ನಡ ಸತ್ಯವೇದವು C.L. Bible (BSI)

6 ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಇಸ್ರಾಯೇಲಿನಿಂದ ಬಂದವರು. ಕಮ್ಮಾರನು ಈ ಬಸವ ವಿಗ್ರಹವನ್ನು ಮಾಡಿದನು. ಅದು ದೇವರಲ್ಲ, ಆದರೆ ಸಮಾರ್ಯದ ಬಸವನನ್ನು ಚೂರುಚೂರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:6
22 ತಿಳಿವುಗಳ ಹೋಲಿಕೆ  

ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.


ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.


ಇಸ್ರಯೇಲ್ ರಾಜರು ಸಮಾರಿಯ ಪಟ್ಟಣಗಳಲ್ಲಿ ಕಟ್ಟಿಸಿದಂಥ ಹಾಗು ಸರ್ವೇಶ್ವರನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳಲ್ಲಿದ್ದ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.


ಇದಲ್ಲದೆ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಬಲಿಪೀಠವನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.


ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?


ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು