Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:7 - ಕನ್ನಡ ಸತ್ಯವೇದವು C.L. Bible (BSI)

7 ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:7
22 ತಿಳಿವುಗಳ ಹೋಲಿಕೆ  

ಕೆಟ್ಟತನವನ್ನು ಬಿತ್ತುವವನು ಕೇಡನ್ನೆ ಕೊಯ್ಯುವನು; ಅವನ ಸಿಟ್ಟು ಅವನನ್ನೆ ಸುಟ್ಟುಬಿಡುವುದು.


ನನಗೆ ತಿಳಿದಮಟ್ಟಿಗೆ, ಕೆಟ್ಟದ್ದನ್ನು ನೆಡುವವರು, ದುಷ್ಟತನವನು ಬಿತ್ತುವವರು, ಅದನ್ನೆ ಕೊಯ್ಯುವರು.


ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ.


ಆದಕಾರಣ ನಾನು ದವಸಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು. ಅವಳ ಮಾನವನ್ನು ಮುಚ್ಚುತ್ತಿದ್ದ ಉಣ್ಣೆಉಡಿಗೆಗಳನ್ನು ಹಿಂತೆಗೆದುಕೊಳ್ಳುವೆನು.


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ಬೀಜವನ್ನು ನೆಟ್ಟ ದಿನವೇ ಬೇಲಿಕಟ್ಟಿದೆ. ಮಾರನೆಯ ದಿನವೇ ಅದು ಮೊಳೆಯುವಂತೆ ಮಾಡಿದೆ. ಆದರೂ ನಿನಗೆ ಸಿಗುವ ಸುಗ್ಗಿ, ವ್ಯಾಧಿ ಮತ್ತು ಅತೀವ ವ್ಯಥೆಯೇ.


ಬಂದಂತೆಯೇ ಹಿಂದಿರುಗಿ ಹೋಗುವನು. ಅವನು ಪಟ್ಟ ಪ್ರಯಾಸವೆಲ್ಲ ಗಾಳಿಗೆ ತೂರಿದಂತೆ ನಿರರ್ಥಕ, ಇದು ದುರದೃಷ್ಟಕರ.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.


ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ನಮ್ಮ ಆಸ್ತಿಪಾಸ್ತಿ ಪರರಪಾಲಾಗಿದೆ ನಮ್ಮ ಮನೆಮಾರುಗಳು ಹೆರವರ ವಶದಲ್ಲಿವೆ.


ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ಅವುಗಳ ಹಿಂದೆಯೆ, ಮೂಡಣ ಗಾಳಿಯಿಂದ ಒಣಗಿ, ಬತ್ತಿ, ಕೆಟ್ಟುಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು