Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದುಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ ಸಂತೋಷ ಪಡಬೇಡ. ಏಕೆಂದರೆ ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ಮಾಡಿದ್ದೀಯೆ. ಎಲ್ಲಾ ಧಾನ್ಯದ ಕಣಗಳಲ್ಲಿ ವ್ಯಭಿಚಾರದ ಕೂಲಿಯನ್ನು ಪ್ರೀತಿ ಮಾಡಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:1
24 ತಿಳಿವುಗಳ ಹೋಲಿಕೆ  

ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


ಆದರೆ ನೀವು ಅಹಂಭಾವದಿಂದ ಕೊಚ್ಚಿಕೊಳ್ಳುತ್ತೀರಿ. ಹಾಗೆ ಕೊಚ್ಚಿಕೊಳ್ಳುವುದು ಸರಿಯಲ್ಲ.


ನೀವು ಹೆಚ್ಚಳಪಡುವುದು ‘ಲೊದೆಬಾರಿನ’ ಗೆಲುವಿನಲ್ಲಿ! ಸ್ವಬಲದಿಂದಲೇ ಕರ್ನಾಯಿಮನ್ನು ಜಯಿಸಿದ್ದೇವೆಂದು ಕೊಚ್ಚಿಕೊಳ್ಳುವುದರಲ್ಲಿ!


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.


ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.


‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.


ಆಹಾ ಖಡ್ಗ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! ಸಾಣೆ ಹಿಡಿದಿದೆ ಹತಿಸುವಂತೆ, ಮಸೆದಿದೆ ಮಿಂಚುವಂತೆ. ಸಂಭ್ರಮಿಸಲಾದೀತೆ ‘ನಮ್ಮ ಕುಮಾರನ ರಾಜದಂಡ’ ಎಂದು? ಮಿಕ್ಕ ದಂಡಗಳನ್ನೆಲ್ಲ ಧಿಕ್ಕರಿಸುವಂಥ ದಂಡವೆಂದುಕೊಂಡು?


‘ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರ, ಕಲ್ಲುಗಳ ವಿಗ್ರಹಗಳನ್ನು ಪೂಜಿಸುವೆವು’ ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆ ಎಷ್ಟು ಮಾತ್ರವೂ ನೆರವೇರದು.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


ಬೀಜವನ್ನು ನೆಟ್ಟ ದಿನವೇ ಬೇಲಿಕಟ್ಟಿದೆ. ಮಾರನೆಯ ದಿನವೇ ಅದು ಮೊಳೆಯುವಂತೆ ಮಾಡಿದೆ. ಆದರೂ ನಿನಗೆ ಸಿಗುವ ಸುಗ್ಗಿ, ವ್ಯಾಧಿ ಮತ್ತು ಅತೀವ ವ್ಯಥೆಯೇ.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


“ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ.


ಸರ್ವಶಕ್ತ ದೇವರು ಇಂತೆನ್ನುತ್ತಾರೆ: “ನಿನ್ನ ಮನಸ್ಸು ಮೋಹಪಾಶಕ್ಕೆ ಸಿಕ್ಕಿ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಿಣಿಯಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು