Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:12 - ಕನ್ನಡ ಸತ್ಯವೇದವು C.L. Bible (BSI)

12 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:12
23 ತಿಳಿವುಗಳ ಹೋಲಿಕೆ  

“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.


ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಎಫ್ರಯಿಮಿನ ಮಕ್ಕಳು ಬೇಟೆಗೆ ಗುರಿ ಆದವರಂತೆ ಕಾಣಿಸುತ್ತಾರೆ. ಎಫ್ರಯಿಮ್ ತನ್ನ ಪುತ್ರರನ್ನು ವಧ್ಯಸ್ಥಾನಕ್ಕೆ ಕರೆದೊಯ್ಯಬೇಕಾಗುವುದು.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ನನ್ನ ಜನರನ್ನು ನಾಡಿನ ಉಕ್ಕಡಗಳಲ್ಲಿ ಮೊರದಿಂದ ಗಾಳಿಗೆ ತೂರಿಬಿಟ್ಟೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸಿದೆನು. ಏಕೆಂದರೆ, ಅವರು ತಮ್ಮ ದುರ್ಮಾರ್ಗದಿಂದ ಹಿಂದಿರುಗದೆ ಹೋದರು.


ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಸರ್ವೇಶ್ವರನ ಆತ್ಮ ಸೌಲನನ್ನು ಬಿಟ್ಟುಹೋಯಿತು. ಅವರಿಂದ ಬಂದ ದುರಾತ್ಮವೊಂದು ಅವನನ್ನು ಪೀಡಿಸುತ್ತಿತ್ತು.


ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಛರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರು ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ.


ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ.


ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.”


ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.


ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.


ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು