Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:17 - ಕನ್ನಡ ಸತ್ಯವೇದವು C.L. Bible (BSI)

17 ತಮ್ಮ ಮಾತಿಗೆ ಕಿವಿಗೊಡದ ಈ ಜನರನ್ನು ಸರ್ವೇಶ್ವರ ತಳ್ಳಿಬಿಡುವರು. ಇತರ ಜನಾಂಗಗಳ ಮಧ್ಯೆ ಅವರು ಅಲೆಮಾರಿಗಳಂತೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಜನರು ನನ್ನ ದೇವರ ಮಾತನ್ನು ಕೇಳಲೊಲ್ಲರು. ಆದ್ದರಿಂದ ಆತನು ಅವರಿಗೆ ಕಿವಿಗೊಡುವದಿಲ್ಲ; ಅವರು ದೇಶದೇಶಗಳಲ್ಲಿ ವಾಸಸ್ಥಾನಗಳಿಲ್ಲದೆ ಅಲೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:17
34 ತಿಳಿವುಗಳ ಹೋಲಿಕೆ  

“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.


ಆ ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ,’ ಎಂದು ಮೋಶೆ ಹೇಳಿದ್ದಾನೆ.


ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.


ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು. ಎಷ್ಟು ವ್ಯಭಿಚಾರಗೈದರೂ ನಿಮಗೆ ಸಂತಾನ ಪ್ರಾಪ್ತಿಯಾಗದು. ಕಾರಣ, ನೀವು ವೇಶ್ಯಾಚಾರಕ್ಕಾಗಿ ಸರ್ವೇಶ್ವರನನ್ನೇ ತಿರಸ್ಕರಿಸಿದ್ದೀರಿ.


ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II


‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?


ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.


ಸರ್ವೇಶ್ವರ ಆದ ನಾನು ಅವರನ್ನು ತಳ್ಳಿಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”


“ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆಯುವಷ್ಟು ಕಾಲ ಆ ನಾಡಿನಲ್ಲಿದ್ದು, ಯಾವುದಾದರೊಂದು ವಿಗ್ರಹವನ್ನು ಮಾಡಿಕೊಂಡು ದ್ರೋಹಿಗಳಾಗಿ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರನ್ನು ಸಿಟ್ಟುಗೊಳಿಸಿದ್ದೇ ಆದರೆ


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು