Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:2 - ಕನ್ನಡ ಸತ್ಯವೇದವು C.L. Bible (BSI)

2 ಸುಗ್ಗಿಯ ಕಣವೂ ದ್ರಾಕ್ಷಾರಸದ ತೊಟ್ಟಿಯೂ ನಿನ್ನ ಜನರಿಗೆ ಜೀವನಾಧಾರವಾಗವು. ಹೊಸದ್ರಾಕ್ಷಾರಸದ ನಿರೀಕ್ಷೆ ಅವರನ್ನು ನಿರಾಶೆಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕಣವೂ ದ್ರಾಕ್ಷೆಯ ತೊಟ್ಟಿಯೂ ನಿನ್ನ ಜನರಿಗೆ ಜೀವನವಾಗವು; ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಆ ಕಣದಲ್ಲಿ ತೂರಿದ ಧಾನ್ಯವು ಇಸ್ರೇಲಿಗೆ ಸಾಕಾಗುವಷ್ಟು ಆಹಾರವನ್ನು ಒದಗಿಸದು. ಇಸ್ರೇಲಿಗೆ ಬೇಕಾಗುವಷ್ಟು ದ್ರಾಕ್ಷಾರಸವಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಧಾನ್ಯ ಕಣವು ಮತ್ತು ದ್ರಾಕ್ಷಿಯ ತೊಟ್ಟಿಯೂ ಅವರನ್ನು ಪೋಷಿಸುವುದಿಲ್ಲ. ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:2
12 ತಿಳಿವುಗಳ ಹೋಲಿಕೆ  

ಆದಕಾರಣ ನಾನು ದವಸಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು. ಅವಳ ಮಾನವನ್ನು ಮುಚ್ಚುತ್ತಿದ್ದ ಉಣ್ಣೆಉಡಿಗೆಗಳನ್ನು ಹಿಂತೆಗೆದುಕೊಳ್ಳುವೆನು.


ಆ ಕಾಲದಲ್ಲಿ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೆ? ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಸೇರು ಮಾತ್ರ ದೊರೆಯುತ್ತಿತ್ತಷ್ಟೆ.


ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.


‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.


ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.


ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು