Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:3 - ಕನ್ನಡ ಸತ್ಯವೇದವು C.L. Bible (BSI)

3 ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ತಿನ್ನುವ ಆಹಾರವು ಹೊಲಸಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:3
24 ತಿಳಿವುಗಳ ಹೋಲಿಕೆ  

“ಹಾಗೆಯೇ ಇಸ್ರಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಸರ್ವೇಶ್ವರನಾದ ನನ್ನ ನುಡಿ.”


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.


ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.


ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.


“ಅವರು ನನ್ನ ಬಳಿಗೆ ಬಾರದ ಕಾರಣ, ಇಸ್ರಯೇಲ್ ಈಜಿಪ್ಟಿಗೆ ಹಿಂದಿರುಗುವುದು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವುದು.


ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.


ನೀವು ಈಜಿಪ್ಟ್ ದೇಶವನ್ನು ಮರಳಿ ಎಂದಿಗೂ ನೋಡುವುದಿಲ್ಲವೆಂದು ಸರ್ವೇಶ್ವರ ಹೇಳಿದ್ದರೂ ಅವರು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗಮಾಡುವರು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನೇ ಗಂಡು ಹೆಣ್ಣು ಎನ್ನದೆ ಗುಲಾಮರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.”


ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.


ನಿಮಗಿಂತ ಮುಂಚೆಯಿದ್ದ ಜನಾಂಗಗಳನ್ನು ಆ ನಾಡು ಕಕ್ಕಿಬಿಟ್ಟ ಪ್ರಕಾರವೇ ಅದು ನಿಮ್ಮಿಂದ ಅದು ಮಲಿನವಾದರೆ ನಿಮ್ಮನ್ನೂ ಅಂತೆಯೇ ಕಕ್ಕಿಬಿಡುವುದು.


ಹೊಟ್ಟೆಪಾಡಿಗಾಗಿ ಕೈ ಒಡ್ಡಿದ್ದೇವೆ ಈಜಿಪ್ಟರಿಗೆ, ಅಶ್ಶೂರ್ಯರಿಗೆ.


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು