Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:4 - ಕನ್ನಡ ಸತ್ಯವೇದವು C.L. Bible (BSI)

4 ಇನ್ನವರು ಸರ್ವೇಶ್ವರಸ್ವಾಮಿಗೆ ನೈವೇದ್ಯವಾಗಿ ದ್ರಾಕ್ಷಾರಸವನ್ನು ಸುರಿಯರು. ಅವರ ಯಜ್ಞಗಳು ಆ ಸ್ವಾಮಿಗೆ ಮೆಚ್ಚುಗೆಯಾಗುವುದಿಲ್ಲ. ಅವರ ಆಹಾರ ಹೆಣದ ಮನೆಯ ಆಹಾರದಂತಿರುವುದು. ಅದನ್ನು ತಿನ್ನುವವರೆಲ್ಲರು ಅಶುದ್ಧರಾಗುವರು. ಅದು ಹೊಟ್ಟೆತುಂಬಲು ಮಾತ್ರ ಸರಿಯೇ ಹೊರತು ದೇವಾಲಯದಲ್ಲಿ ಮಾಡುವ ಅರ್ಪಣೆಗೆ ಸಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗವು; ಅವರ ಆಹಾರವು ಹೆಣದ ಮನೆಯ ಆಹಾರದಂತಿರುವದು, ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಹೊಟ್ಟೆತುಂಬುವದಕ್ಕೆ ಮಾತ್ರ ಅನುಕೂಲಿಸುವದು. ಅದು ಯೆಹೋವನ ಆಲಯಕ್ಕೆ ಬಂದಿಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ದ್ರಾಕ್ಷಾರಸವನ್ನು ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಿಲ್ಲ. ಅವರ ಬಲಿಗಳು ಆತನಿಗೆ ಮೆಚ್ಚಿಗೆಯಾಗಿರುವುದಿಲ್ಲ. ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿರುವುವು. ಅದನ್ನು ತಿನ್ನುವವರೆಲ್ಲರೂ ಅಪವಿತ್ರರಾಗುವರು. ಏಕೆಂದರೆ ಅದು ಅವರ ಹೊಟ್ಟೆ ತುಂಬುವುದಕ್ಕೆ ಮಾತ್ರ ಸರಿಯೇ ಹೊರತು, ಯೆಹೋವ ದೇವರ ಆಲಯಕ್ಕೆ ಸಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:4
33 ತಿಳಿವುಗಳ ಹೋಲಿಕೆ  

ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ನಾವು ಸತ್ತವರಿಗಾಗಿ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದು ಹಾಕಲಿಲ್ಲ; ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಟ್ಟು ನೀವು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ,


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ಎಲೈ ದುಷ್ಟ ಸಂತಾನವೇ, ಹೊಳೆಯ ನುಣುಪುಗಲ್ಲುಗಳೆಂದರೆ ನಿನಗೆ ಅತಿಪ್ರಿಯ. ಹೌದು, ಅವೇ ನಿನ್ನ ಪಾಲಿನ ಭಾಗ್ಯ. ಅವುಗಳಿಗೆ ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದಿರುವೆ, ದವಸ ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿರುವೆ. ಇದನ್ನೆಲ್ಲ ನೋಡಿ ಕೋಪವನ್ನು ನಾನು ಅಡಗಿಸಿಕೊಳ್ಳಲಾದೀತೆ?


“ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.


ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಸರ್ವೇಶ್ವರನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.


ನಿನ್ನ ಸಂತತಿಯವರಲ್ಲಿ, ತಲತಲಾಂತರದವರೆಗೂ, ಯಾವ ಅಂಗವಿಕಲನೂ ದೇವ ಆಹಾರವನ್ನು ಸಮರ್ಪಿಸಲು ನನ್ನ ಸನ್ನಿಧಿಗೆ ಬರಬಾರದು. ಅಂಗವಿಕಲನು ಈ ಸೇವೆಯನ್ನು ವಹಿಸಿಕೊಳ್ಳಲೇಕೂಡದು.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.


ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.


ಅದರ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು.


“ಮನುಷ್ಯನ ಶವವನ್ನು ಸೋಂಕಿದವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.


“ಸನ್ನಿಧಿ ಕಾಣಿಕೆಯ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಿ ಅದರ ಮೇಲೆ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು ಹಾಗೂ ದಾನ್ಯದ್ರವ್ಯಾರ್ಪಣೆಯ ಬಟ್ಟಲುಗಳನ್ನು ಅವರು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಗಳನ್ನು ಅದರ ಮೇಲೆ ಇಡಬೇಕು.


ಒಂದು ಲೀಟರು ಶ್ರೇಷ್ಠವಾದ ಓಲಿವ್ ಎಣ್ಣೆಯನ್ನು ಒಂದು ಕಿಲೋಗ್ರಾಂ ಗೋದಿಹಿಟ್ಟಿಗೆ ಬೆರೆಸಿ ಧಾನ್ಯಾರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮಮಾಡಬೇಕು.


ಸತ್ತವನಿಗಾಗಿ ದುಃಖಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗು ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.


ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.


ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು