ಹೋಶೇಯ 9:7 - ಕನ್ನಡ ಸತ್ಯವೇದವು C.L. Bible (BSI)7 ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿ |