Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:1 - ಕನ್ನಡ ಸತ್ಯವೇದವು J.V. (BSI)

1 ಅರಸನಾದ ದಾವೀದನು ದಿನ ತುಂಬಿದ ಮುದುಕನಾಗಿದ್ದನು. ಸೇವಕರು ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ರಾಜನಾದ ದಾವೀದನು ಬಹಳ ಮುದುಕನಾಗಿದ್ದನು. ಅವನ ದೇಹವು ಬೆಚ್ಚಗಾಗುತ್ತಲೇ ಇರಲಿಲ್ಲ. ಅವನ ಸೇವಕರು ಅವನಿಗೆ ಕಂಬಳಿಗಳನ್ನು ಹೊದಿಸಿದರೂ ಅವನ ದೇಹವು ತಣ್ಣಗೇ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ದಾವೀದನು ವೃದ್ಧನಾಗಿಯೂ, ಬಹಳ ಪ್ರಾಯ ಹೋದವನಾಗಿಯೂ ಇರುವಾಗ, ಅವನ ಮೇಲೆ ಹೊದಿಕೆಗಳನ್ನು ಹಾಕಿದರೂ, ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:1
13 ತಿಳಿವುಗಳ ಹೋಲಿಕೆ  

ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ದಾವೀದನು ಮುಪ್ಪಿನ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿ


ದಾವೀದನು ಮೂವತ್ತು ವರುಷದವನಾದಾಗ ಅರಸನಾಗಿ ನಾಲ್ವತ್ತು ವರುಷ ಆಳಿದನು.


ಅಬ್ರಹಾಮನು ಬಹುದಿನದ ವೃದ್ಧನಾದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.


ಅಬ್ರಹಾಮನೂ ಸಾರಳೂ ಬಹು ವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. ಹೀಗಿರಲಾಗಿ ಆಕೆ -


ಆದರೆ ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ದಿನಹೋದವರಾಗಿದ್ದರು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.


ಆದದರಿಂದ ಅವನ ಸೇವಕರು ಅವನಿಗೆ - ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕತಕ್ಕದ್ದು; ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ಅವನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಮಗ್ಗುಲಲ್ಲಿ ಮಲಗುವದಾದರೆ ಅವನಿಗೆ ಬೆಚ್ಚಗಾಗುವದು ಎಂದು ಹೇಳಿ


ಅರಸನು ಬಹು ವೃದ್ಧನಾಗಿದ್ದದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.


ಮತ್ತು ಒಬ್ಬನ ಮಗ್ಗುಲಲ್ಲೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾಗುವದು; ಒಂಟಿಗನಿಗೆ ಹೇಗೆ ಬೆಚ್ಚಗಾದೀತು.


ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ - ನೀನು ಈಗ ಮುದುಕನಾದಿ; ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು