Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:12 - ಕನ್ನಡ ಸತ್ಯವೇದವು J.V. (BSI)

12 ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಗ ನಿನ್ನ ಮತ್ತು ನಿನ್ನ ಮಗ ಸೊಲೊಮೋನನ ಜೀವವನ್ನು ಉಳಿಸಿಕೊಳ್ಳಬೇಕಾದರೆ ನನ್ನ ಆಲೋಚನೆಯನ್ನು ಕೇಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಜೀವ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವ ಅಪಾಯದಲ್ಲಿರುವಂತಿದೆ. ಆದರೆ ನೀನು ನಿನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂಬುದನ್ನು ನಾನು ನಿನಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:12
14 ತಿಳಿವುಗಳ ಹೋಲಿಕೆ  

ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ - ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು.


ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು


ಯೆರೆಮೀಯನು ಚಿದ್ಕೀಯನಿಗೆ - ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆಹೇಳಿದರೂ ನೀನು ಕೇಳುವದಿಲ್ಲ ಎಂದು ಉತ್ತರಕೊಟ್ಟನು.


ತೈಲವೂ ಸುಗಂಧದ್ರವ್ಯಗಳೂ ಹೇಗೋ ವಿುತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು; ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ಯೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹುಮಂದಿ ಆಲೋಚನಾಪರರಿರುವಲ್ಲಿ ಈಡೇರುವವು.


ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದುಹೋಗುವದು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.


ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡಕೊಂಡು ತನ್ನ ಆಳಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.


ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಫಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.


ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು ಅಂದನು.


ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ - ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು; ಅವನೇ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು ಎಂದು ತನ್ನ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದನಲ್ಲಾ! ಹೀಗಿದ್ದ ಮೇಲೆ ಅದೋನೀಯನು ಆಳುವದೇಕೆ ಎಂದು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು