Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:21 - ಕನ್ನಡ ಸತ್ಯವೇದವು J.V. (BSI)

21 ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:21
11 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಆಗ ಅವನು - ರಾಜ್ಯವು ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಾಯೇಲ್ಯರೆಲ್ಲರೂ ಎದುರು ನೋಡುತ್ತಿದ್ದರೆಂದು ನೀನು ಬಲ್ಲೆಯಷ್ಟೆ; ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ನನ್ನ ಒಡೆಯನೂ ಅರಸನೂ ಆದ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನೀನೇ ಗೊತ್ತುಮಾಡಬೇಕೆಂದು ಇಸ್ರಾಯೇಲ್ಯರೆಲ್ಲರೂ ಕಾದುಕೊಂಡಿರುತ್ತಾರೆ.


ಆಕೆಯು ಹೀಗೆ ಅರಸನ ಸಂಗಡ ಮಾತಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.


ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.


ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು