Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:25 - ಕನ್ನಡ ಸತ್ಯವೇದವು J.V. (BSI)

25 ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈ ದಿನ ಅವನು ಅನೇಕ ಹೋರಿಗಳನ್ನು ಮತ್ತು ಕುರಿಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅವನು ನಿನ್ನ ಇತರ ಗಂಡುಮಕ್ಕಳನ್ನು, ಸೇನಾಧಿಪತಿಗಳನ್ನು ಮತ್ತು ಯಾಜಕನಾದ ಎಬ್ಯಾತಾರನನ್ನು ಆಹ್ವಾನಿಸಿದ್ದನು. ಅವರು ಈಗ ಅವನೊಡನೆ ತಿನ್ನುತ್ತಾ ಕುಡಿಯುತ್ತಾ ಇದ್ದಾರೆ. ‘ರಾಜನಾದ ಅದೋನೀಯನು ಚಿರಾಯುವಾಗಿರಲಿ’ ಎಂದು ಅವರು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:25
19 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಎಲ್ಲಾ ಜನರಿಗೆ - ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ ಎನ್ನಲು ಜನರೆಲ್ಲರೂ - ಅರಸನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ರಾಜನಾಗಿ ಹೋರಿಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೇನಾಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.


ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಪ್ರವಾದಿಯಾದ ನಾತಾನ್, ಬೆನಾಯ, ಯುದ್ಧಭಟರು, ತಮ್ಮನಾದ ಸೊಲೊಮೋನ್ ಇವರನ್ನು ಬಿಟ್ಟು


ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದರು. ಕೂಡಲೆ ಜನರು - ಅರಸನು ಚಿರಂಜೀವಿಯಾಗಿರಲಿ ಎಂದು ಹರಸಿದರು.


ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿವಸ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲ್ಯರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ


ಆದದರಿಂದ ನಮ್ಮ ದೇವರೇ, ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದರು.


ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಅಭಿಷೇಕಿಸಲಿ; ಅನಂತರ ಕೊಂಬನ್ನೂದಿರಿ; ಎಲ್ಲರೂ ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಲಿ.


ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು - ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದನು.


ತಿರಿಗಿ ಬೇರೆ ಆಳುಗಳನ್ನು ಕರೆದು - ನೀವು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ ಹೋಗಿ - ಇಗೋ, ಅಡಿಗೆ ಸಿದ್ಧವಾಗಿದೆ; ನನ್ನ ಹೋರಿಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಯಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಊಟಕ್ಕೆ ಬನ್ನಿರೆಂಬದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


ನನ್ನ ಒಡೆಯನೂ ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವದಕ್ಕೂ ನಿನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.


ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ಆಗ ಅವನು - ರಾಜ್ಯವು ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಾಯೇಲ್ಯರೆಲ್ಲರೂ ಎದುರು ನೋಡುತ್ತಿದ್ದರೆಂದು ನೀನು ಬಲ್ಲೆಯಷ್ಟೆ; ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು.


ಕೂಡಲೆ ಅವರು ಅವನಿಗೋಸ್ಕರ ಮೆಟ್ಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಆರ್ಭಟಿಸಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು