Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:3 - ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಲ್ಲಿ ಅತಿಸುಂದರಿಯಾದ ಹುಡುಗಿಯನ್ನು ಹುಡುಕುವದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರಂತೆಯೇ, ಇಸ್ರಯೇಲರ ಪ್ರಾಂತ್ಯಗಳಲೆಲ್ಲಾ ಅತಿ ಸುಂದರಿಯಾದ ಒಬ್ಬ ಹುಡುಗಿಯನ್ನು ಹುಡುಕುವುದಕ್ಕೆ ಹೋದರು. ಶೂನೇಮ್ ಊರಿನ ಅಬೀಷಗ್ ಎಂಬವಳನ್ನು ಕಂಡುಹಿಡಿದು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ರಾಜನ ಸೇವಕರು ಇಸ್ರೇಲಿನ ಎಲ್ಲ ಕಡೆಗಳಲ್ಲೂ ಯುವತಿಯೊಬ್ಬಳನ್ನು ಹುಡುಕಲಾರಂಭಿಸಿದರು. ಅವರು ರಾಜನನ್ನು ಬೆಚ್ಚಗಿಡಲು ಒಬ್ಬ ಸುಂದರ ಹುಡುಗಿಯನ್ನು ಹುಡುಕಲಾರಂಭಿಸಿದರು. ಅವರಿಗೆ ಅಬೀಷಗ್ ಎಂಬ ಹೆಸರಿನ ಯುವತಿಯು ಸಿಕ್ಕಿದಳು. ಅವಳು ಶೂನೇಮ್ ನಗರದವಳು. ಅವರು ಆ ಯುವತಿಯನ್ನು ರಾಜನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ, ಶೂನೇಮ್ಯಳಾದ ಅಬೀಷಗ್ ಎಂಬವಳನ್ನು ಕಂಡುಕೊಂಡು, ಅವಳನ್ನು ಅರಸನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:3
9 ತಿಳಿವುಗಳ ಹೋಲಿಕೆ  

ಇಜ್ರೇಲ್, ಕೆಸುಲ್ಲೋತ್,


ಮತ್ತು ಅರಸನಿಗೆ ಇಷ್ಟಳಾಗಿ ಕಾಣುವ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಎಂದು ಹೇಳಿದರು. ಅರಸನು ಈ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.


ಅವನ ಸೇವೆಮಾಡುತ್ತಿರುವ ರಾಜಪರಿವಾರದವರು ಅವನಿಗೆ ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವದಕ್ಕೆ ಅಪ್ಪಣೆಮಾಡಬೇಕು.


ಒಂದು ಸಾರಿ ಎಲೀಷನು ಶೂನೇವಿುಗೆ ಹೋದನು. ಅಲ್ಲಿನ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇವಿುನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಎಲ್ಲಾ ಇಸ್ರಾಯೇಲ್ಯರೊಡನೆ ಬಂದು ಗಿಲ್ಬೋವದಲ್ಲಿ ಇಳುಕೊಂಡನು.


ಹೀಗೆ ಆಕೆಯು ಪ್ರಯಾಣಮಾಡಿ ಕರ್ಮೆಲ್‍ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ -


ಆದದರಿಂದ ಅವನ ಸೇವಕರು ಅವನಿಗೆ - ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕತಕ್ಕದ್ದು; ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ಅವನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಮಗ್ಗುಲಲ್ಲಿ ಮಲಗುವದಾದರೆ ಅವನಿಗೆ ಬೆಚ್ಚಗಾಗುವದು ಎಂದು ಹೇಳಿ


ಬಹು ಸುಂದರಿಯಾದ ಈಕೆಯು ಅರಸನನ್ನು ಪರಾಂಬರಿಸುವ ಸೇವಕಿಯಾದಳು. ಅರಸನು ಈಕೆಯನ್ನು ಸಂಗವಿುಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು