Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:30 - ಕನ್ನಡ ಸತ್ಯವೇದವು J.V. (BSI)

30 ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಿ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನನ್ನ ತರುವಾಯ ನನ್ನ ಮಗ ಸೊಲೊಮೋನನೇ ಅರಸನಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು. ನಾನು ನಿನಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಈ ಪ್ರಮಾಣವನ್ನು ಈ ದಿನವೇ ನೆರವೇರಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಂದು ನಾನು ನಿನಗೆ ಮಾಡಿದ ಪ್ರಮಾಣವನ್ನು ಇಂದು ಪೂರೈಸುತ್ತೇನೆ. ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ನಾನು ನಿನಗೆ ಆ ಪ್ರಮಾಣವನ್ನು ಮಾಡಿದ್ದೆನು. ನನ್ನ ನಂತರ ನಿನ್ನ ಮಗ ಸೊಲೊಮೋನನು ರಾಜನಾಗುವನೆಂದೂ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ನಿನಗೆ ಪ್ರಮಾಣ ಮಾಡಿದ್ದೆನು. ನಾನು ನನ್ನ ವಾಗ್ದಾನವನ್ನು ಈಡೇರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ, ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಮೇಲೆ ಆಣೆ ಇಡುತ್ತೇನೆ,” ಎಂದೂ ಪ್ರಮಾಣವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:30
7 ತಿಳಿವುಗಳ ಹೋಲಿಕೆ  

ಆಗ ಆಕೆಯು - ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತನ್ನ ದಾಸಿಯಾದ ನನಗೆ - ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಬೇಕು; ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು ಎಂಬದಾಗಿ ಹೇಳಿದನಲ್ಲಾ!


ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ - ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು; ಅವನೇ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು ಎಂದು ತನ್ನ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದನಲ್ಲಾ! ಹೀಗಿದ್ದ ಮೇಲೆ ಅದೋನೀಯನು ಆಳುವದೇಕೆ ಎಂದು ಹೇಳು.


ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.


ನನಗೆ ದಯಪಾಲಿಸಿದ ಅನೇಕ ಮಂದಿ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್‍ಸಿಂಹಾಸನದ ಮೇಲೆ ಕುಳ್ಳಿರಿಸುವದಕ್ಕೋಸ್ಕರ ಆರಿಸಿಕೊಂಡನು.


ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕೂತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲ್ಯರೆಲ್ಲರೂ ವಿಧೇಯರಾಗಿ ನಡೆಯುವವರಾದರು.


ಅವನು ಐಶ್ವರ್ಯ ಮಾನ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ರಾಜನ ಮಾತಿಗೆ ಅಧಿಕಾರವುಂಟು; ಏನು ಮಾಡುತ್ತೀ ಎಂದು ಅವನನ್ನು ಯಾರು ತಾನೇ ಕೇಳಬಹುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು