Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:33 - ಕನ್ನಡ ಸತ್ಯವೇದವು J.V. (BSI)

33 ಅವರು ಅರಸನ ಸನ್ನಿಧಿಗೆ ಬರಲು ಅರಸನು ಅವರಿಗೆ - ನೀವು ನನ್ನ ಸೇವಕರನ್ನು ಕರಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:33
12 ತಿಳಿವುಗಳ ಹೋಲಿಕೆ  

ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಸಾರ್ಥಕನಾದನು.


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.


ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನು ಬಾಗಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದ ನಗರದ ಹೊರಗಣ ಬಲು ಎತ್ತರವಾದ ಗೋಡೆಯನ್ನು ಕಟ್ಟಿಸಿ ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಪತಿಗಳನ್ನಿರಿಸಿದನು.


ಹಗ್ಗೀತಳ ಮಗನಾದ ಅದೋನೀಯನು ನಾನೇ ಅರಸನಾಗತಕ್ಕವನು ಎಂಬದಾಗಿ ಉಬ್ಬಿಕೊಂಡು ತನಗೋಸ್ಕರ ರಥರಥಾಶ್ವಗಳನ್ನೂ ಮುಂದೆ ಓಡುವದಕ್ಕಾಗಿ ಐವತ್ತು ಮಂದಿ ಸಿಪಾಯಿಗಳನ್ನೂ ಇಟ್ಟುಕೊಂಡನು.


ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ಪಶುಗಳಿಗೆ ಬೇರೆ ಜಾತಿಯ ಪಶುಗಳನ್ನು ಹಾರಿಸಬಾರದು; ನಿಮ್ಮ ಹೊಲಗಳಲ್ಲಿ ವಿುಶ್ರಬೀಜಗಳನ್ನು ಬಿತ್ತಬಾರದು; ನಾರೂ ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.


ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ ಅಡ್ಡಬೀಳಿರಿ ಎಂದು ಪ್ರಕಟಣೆಮಾಡಿಸಿ ಅವನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.


ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನು ಹತ್ತಿ ಓಡಿಹೋದರು.


ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿ ಆರಿಸಿಕೊಂಡು ಪ್ರಭುವಾಗುವದಕ್ಕೂ ಚಾದೋಕನನ್ನು ಯಾಜಕನಾಗುವದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು