1 ಅರಸುಗಳು 1:36 - ಕನ್ನಡ ಸತ್ಯವೇದವು J.V. (BSI)36 ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ - ಹಾಗಾಗಲಿ; ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಯೆಹೋಯಾದಾವನ ಮಗ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ; ನನ್ನ ಒಡೆಯರ ಹಾಗು ಅರಸರ ದೇವರಾದ ಸರ್ವೇಶ್ವರ ಇದನ್ನು ಸ್ಥಿರಪಡಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೆಹೋಯಾದಾವನ ಮಗನಾದ ಬೆನಾಯನು, “ಆಮೆನ್, ನಿನ್ನ ದೇವರಾದ ಯೆಹೋವನು ಇದನ್ನು ಕಾರ್ಯಗತಗೊಳಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೆಹೋಯಾದಾವನ ಮಗ ಬೆನಾಯನು ಅರಸನಿಗೆ ಉತ್ತರವಾಗಿ, “ಆಮೆನ್, ಅರಸನಾದ ನನ್ನ ಒಡೆಯನ ದೇವರಾದ ಯೆಹೋವ ದೇವರು ಹಾಗೆಯೇ ಹೇಳಲಿ. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.