Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:50 - ಕನ್ನಡ ಸತ್ಯವೇದವು J.V. (BSI)

50 ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅದೋನೀಯನು ಸೊಲೊಮೋನನಿಗೆ ಹೆದರಿ, ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಅದೋನೀಯನೂ ಹೆದರಿಕೊಂಡು ಯಜ್ಞವೇದಿಕೆಯ ಬಳಿಗೆ ಹೋಗಿ, ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:50
9 ತಿಳಿವುಗಳ ಹೋಲಿಕೆ  

ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. (ಅವನು ಅಬ್ಷಾಲೋಮನ ಪಕ್ಷವನ್ನು ಹಿಡಿಯದಿದ್ದರೂ ಅದೋನೀಯನ ಪಕ್ಷವನ್ನು ಹಿಡಿದಿದ್ದನು.)


ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.


ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಗೆ ಏಕವಾಗಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.


ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು; ಅವು ಯಜ್ಞವೇದಿಗೆ ಏಕವಾಗಿರಬೇಕು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ಕೊಲ್ಲಬೇಕೆಂಬ ಉದ್ದೇಶದಿಂದಲೇ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಯಜ್ಞವೇದಿಯ ಬಳಿಯಿಂದಲೂ ಎಳೆದು ಅವನಿಗೆ ಮರಣಶಿಕ್ಷೆಯನ್ನು ಕೊಡಬೇಕು.


ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ.


ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮತಮ್ಮ ಮನೆಗಳಿಗೆ ಹೊರಟುಹೋದರು.


ದೂತರು ಬಂದು ಸೊಲೊಮೋನನಿಗೆ - ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು - ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವದಿಲ್ಲವೆಂಬದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತಾನೆ ಎಂಬದನ್ನು ತಿಳಿಸಿದಾಗ


ಹೋಮಕುಂಡದ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು