Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:51 - ಕನ್ನಡ ಸತ್ಯವೇದವು J.V. (BSI)

51 ದೂತರು ಬಂದು ಸೊಲೊಮೋನನಿಗೆ - ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು - ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವದಿಲ್ಲವೆಂಬದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತಾನೆ ಎಂಬದನ್ನು ತಿಳಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂಬುದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ’” ಎಂಬುದಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡಿದ್ದಾನೆ. ಅರಸ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂದು ಈ ದಿನ ನನಗೆ ಪ್ರಮಾಣ ಮಾಡಬೇಕೆಂದು ಬೇಡಿಕೊಳ್ಳುತ್ತಾನೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆಗ ಯಾರೋ ಒಬ್ಬರು ಸೊಲೊಮೋನನಿಗೆ, “ಅದೋನೀಯನು ನಿನಗೆ ಬಹಳವಾಗಿ ಹೆದರಿಕೊಂಡು ಪವಿತ್ರಗುಡಾರದ ಯಜ್ಞವೇದಿಕೆಯ ಬಳಿಗೆ ಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಬಿಡದೆ ಹಿಡಿದುಕೊಂಡೇ ಇದ್ದಾನೆ, ‘ನನ್ನನ್ನು ಕೊಲ್ಲುವುದಿಲ್ಲವೆಂದು ಪ್ರಮಾಣ ಮಾಡುವಂತೆ ರಾಜನಾದ ಸೊಲೊಮೋನನಿಗೆ ತಿಳಿಸಿ’ ಎಂಬುದಾಗಿ ಅದೋನೀಯನು ಕೇಳಿಕೊಳ್ಳುತ್ತಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಆಗ ಒಬ್ಬನು ಅರಸನಾದ ಸೊಲೊಮೋನನಿಗೆ, “ಅದೋನೀಯನು, ನಿನಗೆ ಭಯಪಡುತ್ತಾನೆ. ಏಕೆಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ಖಡ್ಗದಿಂದ ತನ್ನ ಸೇವಕನನ್ನು ಕೊಲ್ಲುವುದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ,’ ಎಂದು ಹೇಳುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:51
2 ತಿಳಿವುಗಳ ಹೋಲಿಕೆ  

ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.


ಅವನು - ಅದೋನೀಯನು ಸತ್ಪುರುಷನಾಗಿ ನಡೆಯುವದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ; ಅವನಲ್ಲಿ ಕೆಟ್ಟತನವು ಕಂಡುಬರುವದಾದರೆ ಅವನು ಸಾಯುವನು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು