1 ಅರಸುಗಳು 1:8 - ಕನ್ನಡ ಸತ್ಯವೇದವು J.V. (BSI)8 ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ. ಅಧ್ಯಾಯವನ್ನು ನೋಡಿ |