Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನಾಮ ಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬದ ರಾಣಿಯು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಶೆಬದ ರಾಣಿ ಸೊಲೊಮೋನನ ಬಗ್ಗೆ ಕೇಳಿದಳು. ಅವಳು ಒಗಟುಗಳಿಂದ ಅವನನ್ನು ಪರೀಕ್ಷಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಶೆಬದ ರಾಣಿಯು ಯೆಹೋವ ದೇವರ ನಾಮದ ಮಹತ್ತಿನಿಂದ ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:1
28 ತಿಳಿವುಗಳ ಹೋಲಿಕೆ  

ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.


ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಅವನು ಬಾಳಲಿ; ಶೆಬಾ ಪ್ರಾಂತದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳುಂಟಾಗಲಿ.


ಕೂಷನ ಸಂತಾನದವರು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬ ಜನಾಂಗಗಳು.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ನಾನು ಧರ್ಮರಹಸ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.


ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನವಿಶೇಷವನ್ನು ಕುರಿತು ಕೇಳಿದ ಭೂಪಾಲರಲ್ಲಿಯೂ ಅನೇಕರು ಅವನ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಬಂದರು.


ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಪ್ರಸಿದ್ಧವಾಯಿತು.


ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಯೂರ್ಯರೂ ಲೆಟೂಶ್ಯರೂ ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಆದರೆ ಪ್ರತ್ಯೇಕವಾಗಿ ಆತನು ತನ್ನ ಆಪ್ತಶಿಷ್ಯರಿಗೆ ಎಲ್ಲವನ್ನು ಬಿಚ್ಚಿ ಹೇಳಿದನು.


ಹೀಗೆ - ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕಾದಿಯಿಂದ ಮರೆಯಾಗಿದ್ದವುಗಳನ್ನು ಹೊರಪಡಿಸುವೆನು ಎಂದು ಒಬ್ಬ ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಶೆಬದವರೂ ದೆದಾನಿನವರೂ ತಾರ್ಷೀಷಿನ ವರ್ತಕರೂ ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ - ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು ದನ ಮುಂತಾದ ಸೊತ್ತನ್ನು ಅಪಹರಿಸಿ ಅಪಾರವಾದ ಆಸ್ತಿಯನ್ನು ಸುಲಿದುಕೊಂಡುಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯಾ ಎಂದು ಕೇಳುವರು.


ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವಿಕೆಯ ಹೆಸರುವಾಸಿಯು ಜನಾಂಗಗಳಲ್ಲಿ ಹಬ್ಬಿತು; ಇದು ಕರ್ತನಾದ ಯೆಹೋವನ ನುಡಿ.


ಅವರಲ್ಲಿ ತಿಂಗಳೊಂದಕ್ಕೆ ಹತ್ತುಸಾವಿರ ಮಂದಿಯಂತೆ ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.


ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು