Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:18 - ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಲ್ಲದೆ, ಅರಸನು ದೊಡ್ಡದಾದ ಒಂದು ದಂತಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜನಾದ ಸೊಲೊಮೋನನು ವಿಶಾಲವಾದ ದಂತದ ಸಿಂಹಾಸನವನ್ನು ಸಹ ಮಾಡಿಸಿದನು. ಅವನು ಅಪ್ಪಟ ಚಿನ್ನದ ತಗಡನ್ನು ಅದಕ್ಕೆ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:18
14 ತಿಳಿವುಗಳ ಹೋಲಿಕೆ  

ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶಿಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ಜಂತದ ಸಾಮಾನು, ಬಹು ಬೆಲೆಯುಳ್ಳ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ ಇವುಗಳಿಂದ ಮಾಡಿದ ಸಕಲ ವಿಧವಾದ ಪಾತ್ರೆ,


ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ;


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ದಂತದ ಮಂಚಗಳ ಮೇಲೆ ಮಲಗುತ್ತಾರೆ, ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ; ಹಿಂಡಿನ ಮರಿಗಳನ್ನೂ ಕೊಟ್ಟಿಗೆಯ ಕರುಗಳನ್ನೂ ತಿನ್ನುತ್ತಾರೆ;


ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.


ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನಿನ್ನ ರಾಜದಂಡವು ನ್ಯಾಯಸ್ಥಾಪಕವಾದದ್ದೇ.


ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು ಇವುಗಳ ವಿವರವೂ ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅದಕ್ಕೆ ಆರು ಮೆಟ್ಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು