Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:22 - ಕನ್ನಡ ಸತ್ಯವೇದವು J.V. (BSI)

22 ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ರಾಜನಾದ ಸೊಲೊಮೋನನ ಹತ್ತಿರ ಅನೇಕ ಸರಕು ಸಾಗಣಿಕೆಯ ಹಡಗುಗಳಿದ್ದವು. ಅವನು ಅವುಗಳನ್ನು ಇತರ ದೇಶಗಳಲ್ಲಿನ ವ್ಯಾಪಾರಕ್ಕಾಗಿ ಕಳುಹಿಸುತ್ತಿದ್ದನು. ಇವು ಹೀರಾಮನ ಹಡಗುಗಳು. ಈ ಹಡಗುಗಳು ಬಂಗಾರ, ಬೆಳ್ಳಿ, ದಂತ ಮತ್ತು ಪ್ರಾಣಿಗಳನ್ನು ಹೊಸದಾಗಿ ತುಂಬಿಕೊಂಡು ಮೂರು ವರ್ಷಕ್ಕೊಮ್ಮೆ ಹಿಂದಿರುಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:22
21 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳಗಳವರು; ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ದೇಶವನ್ನು ಆವರಿಸು; ನಡುಕಟ್ಟು [ಸಡಲಿತು], ಇನ್ನಿಲ್ಲ.


ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ಕರಾವಳಿಯ ನಿವಾಸಿಗಳೇ, ಅಂಗಲಾಚಿರಿ!


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).


ಎಲ್ಲಾ ದೊಡ್ಡ ದೊಡ್ಡ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿಗೂ ಆ ದಿನವು ತಪ್ಪದೆ ಬರುವದು.


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ ಬೆಳ್ಳಿ ದಂತ ಕಪಿ ನವಿಲು ಇವುಗಳನ್ನು ತರುತ್ತಿದ್ದವು.


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ನಾನು ಚಳಿಗಾಲದ ಅರಮನೆಯನ್ನೂ ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು; ದಂತಮಂದಿರಗಳು ಹಾಳಾಗುವವು, ಮಹಾಸೌಧಗಳು ಕೊನೆಗಾಣುವವು; ಇದು ಯೆಹೋವನ ನುಡಿ.


ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ ಕಬ್ಬಿಣ ತವರ ಸೀಸಗಳನ್ನು ನಿನಗೆ ಒದಗಿಸಿದರು.


ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ?


ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;


ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‍ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.


ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲವಾದದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ದೇದಾನಿನವರು ನಿನ್ನ ವರ್ತಕರು; ಬಹು ದ್ವೀಪಗಳ ಉತ್ಪತ್ತಿಯು ನಿನ್ನ ಕೈಗೆ ಸೇರಿತು; ಗಜದಂತಗಳನ್ನೂ ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸಿದರು.


ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು - ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣಮಾಡುವದಕ್ಕೆ ಅಪ್ಪಣೆಯಾಗಲಿ ಎಂದು ಬೇಡಿಕೊಂಡನು; ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದದರಿಂದ ಓಫೀರನ್ನು ಮುಟ್ಟಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು