1 ಅರಸುಗಳು 10:24 - ಕನ್ನಡ ಸತ್ಯವೇದವು J.V. (BSI)24 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತರೂ ಅವನ ದರ್ಶನವನ್ನು ಬಯಸಿದರು. ಅಧ್ಯಾಯವನ್ನು ನೋಡಿ |