1 ಅರಸುಗಳು 10:29 - ಕನ್ನಡ ಸತ್ಯವೇದವು J.V. (BSI)29 ಐಗುಪ್ತದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಯಿತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಸಿಕ್ಕುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈಜಿಪ್ಟ್ ದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳನ್ನೂ ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರಿಗೆ ಇವರ ಮುಖಾಂತರವೇ ಮಾರಾಟವಾಗುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಈಜಿಪ್ಟಿನ ಒಂದು ರಥದ ಬೆಲೆಯು ಏಳು ಕಿಲೋಗ್ರಾಂ ಆದರೆ ಒಂದು ಕುದುರೆಯ ಬೆಲೆಯು ಎರಡು ಕಿಲೋಗ್ರಾಂ ಬೆಳ್ಳಿಯಾಗಿತ್ತು. ಸೊಲೊಮೋನನು ಹಿತ್ತಿಯ ಮತ್ತು ಅರಾಮ್ಯ ರಾಜರುಗಳಿಗೆ ಕುದುರೆಗಳನ್ನೂ ರಥಗಳನ್ನೂ ಮಾರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು. ಅಧ್ಯಾಯವನ್ನು ನೋಡಿ |