1 ಅರಸುಗಳು 10:7 - ಕನ್ನಡ ಸತ್ಯವೇದವು J.V. (BSI)7 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನ ವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನೇ ಬಂದು, ನನ್ನ ಸ್ವಂತ ಕಣ್ಣುಗಳಿಂದ ಆ ಸಂಗತಿಗಳನ್ನು ನೋಡುವವರೆಗೆ ನಾನು ನಂಬಲೇ ಇಲ್ಲ. ಆದರೆ ನಾನು ಕೇಳಿದುದಕ್ಕಿಂತಲೂ ಮಹತ್ವವಾದ ಸಂಗತಿಗಳನ್ನು ಈಗ ನೋಡುತ್ತಿದ್ದೇನೆ. ಜನರು ಹೇಳಿದುದಕ್ಕಿಂತ ಅತ್ಯಂತ ಹೆಚ್ಚಿನ ಜ್ಞಾನವೂ ಐಶ್ವರ್ಯವೂ ನಿನ್ನಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಿನ್ನ ಜ್ಞಾನವೂ, ನಿನ್ನ ಸಂಪತ್ತೂ ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ. ಅಧ್ಯಾಯವನ್ನು ನೋಡಿ |