Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:12 - ಕನ್ನಡ ಸತ್ಯವೇದವು J.V. (BSI)

12 ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನಿನ್ನ ತಂದೆಯಾದ ದಾವೀದನನ್ನು ನಾನು ಪ್ರೀತಿಸಿದ್ದರಿಂದ ನೀನು ಜೀವಂತವಾಗಿರುವಾಗಲೇ ನಿನ್ನ ರಾಜ್ಯವನ್ನು ನಿನ್ನಿಂದ ನಾನು ತೆಗೆದುಕೊಳ್ಳುವುದಿಲ್ಲ. ನಿನ್ನ ಮಗನು ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಅದನ್ನು ಅವನಿಂದ ತೆಗೆದುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನಿನ್ನ ತಂದೆ ದಾವೀದನಿಗೋಸ್ಕರ ನಿನ್ನ ಕಾಲದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:12
16 ತಿಳಿವುಗಳ ಹೋಲಿಕೆ  

ನನ್ನ ಜೀವಮಾನದಲ್ಲಿ ಹೇಗೂ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.


ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.


ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು ಎಂದು ಹೇಳಿದನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಅವನಿಗೆ - ನೀನು ಈ ಪ್ರಕಾರ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.


ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ರಾಜ್ಯವನ್ನೆಲ್ಲಾ ಕಿತ್ತು ಕೊಳ್ಳುವದಿಲ್ಲ; ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್‍ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು ಎಂದು ಹೇಳಿದನು.


ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ, ಇಸ್ರಾಯೇಲ್‍ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು


ಆದರೆ ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.


ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.


ತನ್ನ ಸೇವಕನಾದ ದಾವೀದನ ನಿವಿುತ್ತವಾಗಿಯೂ ತಾನು ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದ ನಿವಿುತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾನೆ.


ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿವಿುತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ಆದರೂ ಯೆಹೋವನು ಯೆಹೂದರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂಬದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ಪ್ರಮಾಣವನ್ನು ನೆನಸಿ ಅದನ್ನು ಉಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು