Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರೋಧವಾಗಿ ಏಳಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧ ದಂಗೆಯೇಳುವಂತೆ ಮಾಡಿದರು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:14
13 ತಿಳಿವುಗಳ ಹೋಲಿಕೆ  

ಇಗೋ, ಅವರಿಗೆ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು; ಇವರು ಬೆಳ್ಳಿಯನ್ನು ಲಕ್ಷಿಸರು, ಬಂಗಾರವನ್ನು ಪ್ರೀತಿಸರು.


ಸೇನಾಧೀಶ್ವರನಾದ ಯೆಹೋವನು ಓರೇಬನ ಬಂಡೆಯ ಹತ್ತಿರ ವಿುದ್ಯಾನ್ಯರನ್ನು ಹತಮಾಡಿದಂತೆ ಅವರ ಮೇಲೆಯೂ ಕೊರಡೆಯನ್ನು ಬೀಸುವನು; ಆತನು ದಂಡವನ್ನು ಸಮುದ್ರದ ಮೇಲೆ ಚಾಚಿ ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.


ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಯೆಹೋವನು ತಿರಿಗಿ ಇಸ್ರಾಯೇಲ್ಯರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಯೆಹೂದ್ಯ ಕುಲಗಳವರ ಖಾನೇಷುಮಾರಿಮಾಡುವದಕ್ಕೆ ಪ್ರೇರೇಪಿಸಿದನು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು.


ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ರಾಜ್ಯವನ್ನೆಲ್ಲಾ ಕಿತ್ತು ಕೊಳ್ಳುವದಿಲ್ಲ; ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್‍ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು ಎಂದು ಹೇಳಿದನು.


ದಾವೀದನಿಗೂ ಎದೋಮ್ಯರಿಗೂ ಯುದ್ಧನಡಿಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಾಯೇಲ್ಯರನ್ನು ಹೂಣಿಟ್ಟು


ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬವನು.


ಅದಲ್ಲದೆ ಎದೋಮ್ಯರ ದೇಶವನ್ನೂ ಸ್ವಾಧೀನ ಪಡಿಸಿಕೊಂಡಿದ್ದಾನೆ; ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು