Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:21 - ಕನ್ನಡ ಸತ್ಯವೇದವು J.V. (BSI)

21 ದಾವೀದನು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನಿಗೆ - ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ನನಗೆ ಅಪ್ಪಣೆಕೊಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದಾವೀದನು ಸತ್ತು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಈಜಿಪ್ಟಿನಲ್ಲಿದ್ದ ಹದದನು ಕೇಳಿದನು. ಫರೋಹನಿಗೆ ಅವನು, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ಅಪ್ಪಣೆಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾವೀದನು ಸತ್ತುಹೋದನೆಂಬುದು ಹದದನಿಗೆ ಈಜಿಪ್ಟಿನಲ್ಲಿ ತಿಳಿಯಿತು. ಸೈನ್ಯದ ಸೇನಾಪತಿಯಾದ ಯೋವಾಬನು ಸತ್ತನೆಂಬುದೂ ಅವನಿಗೆ ತಿಳಿಯಿತು. ಆದ್ದರಿಂದ ಹದದನು ಫರೋಹನಿಗೆ, “ಸ್ವದೇಶದ ನನ್ನ ಮನೆಗೆ ನನಗೆ ಹೋಗಲು ಬಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ದಾವೀದನು ಮರಣ ಹೊಂದಿದನೆಂದೂ, ಸೇನಾಧಿಪತಿಯಾದ ಯೋವಾಬನು ಸತ್ತು ಹೋದನೆಂದೂ, ಹದದನು ಈಜಿಪ್ಟಿನಲ್ಲಿ ಕೇಳಿದಾಗ, ಹದದನು ಫರೋಹನಿಗೆ, “ನಾನು ನನ್ನ ದೇಶಕ್ಕೆ ಹೋಗುವಹಾಗೆ ನನ್ನನ್ನು ಕಳುಹಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:21
10 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‍ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತುಹೋದರು ಎಂದು ಹೇಳಿದನು.


ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


ಅಬ್ನೇರನು ದಾವೀದನಿಗೆ - ನಾನು ಹೊರಟುಹೋಗಿ ಇಸ್ರಾಯೇಲ್ಯರನ್ನೆಲ್ಲಾ ಕೂಡಿಸಿ ನನ್ನ ಒಡೆಯನಾದ ಅರಸನ ಬಳಿಗೆ ಕರಕೊಂಡುಬರುವೆನು; ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು; ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು ಎಂದು ಹೇಳಲು ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.


ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು - ಏಳು, ನಿನ್ನನ್ನು ಸಾಗಕಳುಹಿಸುತ್ತೇನೆ ಎಂದು ಎಬ್ಬಿಸಲು ಅವನೆದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ


ಅದಕ್ಕವಳು - ನಿಮ್ಮ ಮಾತಿನಂತೆಯೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಕಿಗೆ ಕಟ್ಟಿದಳು.


ವಿುದ್ಯಾನ್‍ದೇಶದಲ್ಲಿ ಯೆಹೋವನು ಮೋಶೆಗೆ - ನೀನು ಐಗುಪ್ತದೇಶಕ್ಕೆ ತಿರಿಗಿ ಹೋಗು; ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದು ಹೇಳಿದ್ದರಿಂದ


ಆಗ ತನ್ನ ಅಣ್ಣತಮ್ಮಂದಿರಿಗೆ - ನೀವು ದಾರಿಯಲ್ಲಿ ಜಗಳಮಾಡಬೇಡಿರಿ ಎಂದು ಬುದ್ಧಿ ಹೇಳಿ ಅವರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟನು; ಅವರು ಹೊರಟುಹೋದರು.


ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಬೆನೇಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು.


ಫರೋಹನು ಅವನನ್ನು - ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಆಶಿಸುತ್ತೀ ಎಂದು ಕೇಳಲು ಅವನು - ಏನೂ ಕೊರತೆಯಾಗಿರುವದಿಲ್ಲ; ಆದರೂ ನನಗೆ ಹೋಗುವದಕ್ಕೆ ಅಪ್ಪಣೆಯಾಗಬೇಕು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು