1 ಅರಸುಗಳು 11:22 - ಕನ್ನಡ ಸತ್ಯವೇದವು J.V. (BSI)22 ಫರೋಹನು ಅವನನ್ನು - ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಆಶಿಸುತ್ತೀ ಎಂದು ಕೇಳಲು ಅವನು - ಏನೂ ಕೊರತೆಯಾಗಿರುವದಿಲ್ಲ; ಆದರೂ ನನಗೆ ಹೋಗುವದಕ್ಕೆ ಅಪ್ಪಣೆಯಾಗಬೇಕು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಫರೋಹನು, “ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಏಕೆ ಆಶಿಸುತ್ತಿ?” ಎಂದು ಕೇಳಿದನು. ಅವನು, “ಏನೂ ಕೊರತೆಯಾಗಿಲ್ಲ; ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಉತ್ತರಕೊಟ್ಟನು. ಹದದನು ತನ್ನ ಊರಿಗೆ ಮರಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಫರೋಹನು “ನಿನಗೆ ಬೇಕಾದುದ್ದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು. ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು. ಅಧ್ಯಾಯವನ್ನು ನೋಡಿ |