Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:29 - ಕನ್ನಡ ಸತ್ಯವೇದವು J.V. (BSI)

29 ಒಂದು ದಿವಸ ಯಾರೊಬ್ಬಾಮನು ಯೆರೂಸಲೇವಿುನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಒಂದು ದಿನ ಯಾರೊಬ್ಬಾಮನು ಜೆರುಸಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ಆ ದೇಶದಲ್ಲಿ ಇವರಿಬ್ಬರೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆ ಕಾಲದಲ್ಲಿ, ಯಾರೊಬ್ಬಾಮನು ಯೆರೂಸಲೇಮಿನೊಳಗಿಂದ ಹೊರಟು ಹೋಗುವಾಗ, ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿಯಲ್ಲಿ ಕಂಡನು. ಅವನು ಹೊಸ ಕಂಬಳಿಯನ್ನು ಹೊದ್ದುಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:29
10 ತಿಳಿವುಗಳ ಹೋಲಿಕೆ  

ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯು ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆ, ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ - ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷ ಮಾರ್ಪಡಿಸಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರ ಮೇಲೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.


ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು; ಅಲ್ಲಿ ಬಿಡಿಸುವವರಾರೂ ಇರಲಿಲ್ಲವಾದದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ಅವನಿಗೆ - ನೀನು ಈ ಪ್ರಕಾರ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.


ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿದ್ದದ್ದರಿಂದ ಕಾಣಿಸುತ್ತಿರಲಿಲ್ಲ.


ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಕರಿಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು