Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:3 - ಕನ್ನಡ ಸತ್ಯವೇದವು J.V. (BSI)

3 ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಮಹಿಳೆಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೊಲೊಮೋನನಿಗೆ ಏಳುನೂರು ಮಂದಿ ಪತ್ನಿಯರಿದ್ದರು. (ಈ ಸ್ತ್ರೀಯರು ಅನ್ಯದೇಶಗಳ ನಾಯಕರ ಹೆಣ್ಣುಮಕ್ಕಳು) ಅವನಿಗೆ ಪತ್ನಿಯರಂತಿರುವ ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದೇವರಿಗೆ ವಿಮುಖನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:3
12 ತಿಳಿವುಗಳ ಹೋಲಿಕೆ  

ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.


ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.


ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವದಕ್ಕೆ ಅವಕಾಶವಾಗುವದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ಅರುವತ್ತು ಮಂದಿ ರಾಣಿಯರೂ ಎಂಭತ್ತು ಜನ ಉಪಪತ್ನಿಯರೂ ಲೆಕ್ಕವಿಲ್ಲದ ಯುವತಿಯರೂ ನನಗುಂಟು.


ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ, ಇವಳು ತಾಯಿಗೆ ಏಕಪುತ್ರಿಯು, ಹೆತ್ತವಳಿಗೆ ಆಪ್ತಳು. ಯುವತಿಯರು ನೋಡಿದಾಗ ಧನ್ಯಳೆಂದು ಹೇಳಿದರು. ರಾಣಿಯರೂ ಉಪಸ್ತ್ರೀಯರೂ ಕಂಡಾಗ ಹೀಗೆ ಪ್ರಶಂಸಿಸಿದರು -


ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಸೇವಿಸಿದರು.


ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಕೋಪವೂ ಉಂಟಾಗುವದು.


ಮತ್ತು ಬೆಳ್ಳಿ ಬಂಗಾರಗಳನ್ನೂ ಅರಸರ ನಜರನ್ನೂ ದಿಗ್ದೇಶಗಳಿಂದ ಕಪ್ಪವನ್ನೂ ಸಂಗ್ರಹಿಸಿಕೊಂಡೆನು; ಗಾಯಕಗಾಯಕಿಯರನ್ನೂ ಮನುಷ್ಯರಿಗೆ ಭೋಗ್ಯರಾದ ಅನೇಕ ಉಪಪತ್ನಿಯರನ್ನೂ ಸಂಪಾದಿಸಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು